John 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
Kannada BSI Bible 2016
ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಭೂಲೋಕದಲ್ಲಿ ನಡೆಯುವ ಕಾರ್ಯಗಳನ್ನು ಕುರಿತು ನಿಮಗೆ ಹೇಳುವಾಗ ನೀವು ನಂಬದೆಹೋದರೆ ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬೀರಿ?
Kannada Bible (KNCL) BSI 2016
ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?