John 3:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
Kannada BSI Bible 2016
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.
Kannada Bible (KNCL) BSI 2016
ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.