John 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
Kannada BSI Bible 2016
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.
Kannada Bible (KNCL) BSI 2016
ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.