John 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
Kannada BSI Bible 2016
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಟ್ಟದ್ದನ್ನು ಮಾಡುವವರು ಬೆಳಕನ್ನು ಸಹಿಸುವದಿಲ್ಲ, ತಮ್ಮ ಕೃತ್ಯಗಳು ದುಷ್ಕೃತ್ಯಗಳಾಗಿ ತೋರಿಬಂದಾವೆಂದು ಬೆಳಕಿಗೆ ಬರುವದಿಲ್ಲ;
Kannada Bible (KNCL) BSI 2016
ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.