John 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸತ್ಯಮಾರ್ಗವನ್ನು ಅನುಸರಿಸುವವನು ಬೆಳಕಿಗೆ ಬರುತ್ತಾನೆ. ಅವನು ಮಾಡಿರುವ ಕಾರ್ಯಗಳೆಲ್ಲಾ ದೇವರ ಮೂಲಕವಾಗಿ ಮಾಡಿದ ಕಾರ್ಯಗಳೆಂದು ಬೆಳಕು ತೋರಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
Kannada BSI Bible 2016
ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ತನ್ನ ಕೃತ್ಯಗಳನ್ನು ಮಾಡಿದ್ದೇನೆಂದು ತೋರಿಬರುವಂತೆ ಬೆಳಕಿಗೆ ಬರುತ್ತಾನೆ.
Kannada Bible (KNCL) BSI 2016
ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.