John 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
Kannada BSI Bible 2016
ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಕೂಡ ಇದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು.
Kannada Bible (KNCL) BSI 2016
ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು.