John 3:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನು ಸಹ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಐನೋನ್ ಎಂಬ ಊರು ಸಲೀಮ್ ಊರಿನ ಸಮೀಪದಲ್ಲಿದೆ. ಅಲ್ಲಿ ಬೇಕಾದಷ್ಟು ನೀರಿದ್ದುದರಿಂದ ಯೋಹಾನನು ಅಲ್ಲಿ ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಜನರು ಅಲ್ಲಿಗೆ ಬಂದು ದೀಕ್ಷಾಸ್ನಾನ ತೆಗೆದುಕೊಳ್ಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
Kannada BSI Bible 2016
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನೂ ಸಲೀಮೂರಿನ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು; ಅಲ್ಲಿ ಬಹಳ ನೀರಿತ್ತು; ಜನರು ಬಂದು ಸ್ನಾನಮಾಡಿಸಿಕೊಳ್ಳುತ್ತಾ ಇದ್ದರು;
Kannada Bible (KNCL) BSI 2016
ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೋಹಾನನು ಸಹ ಸಲೀಮ್ ಎಂಬ ಊರಿನ ಸಮೀಪದಲ್ಲಿದ್ದ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಏಕೆಂದರೆ ಅಲ್ಲಿ ಬಹಳ ನೀರು ಇತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.