John 3:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
Kannada BSI Bible 2016
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು
Kannada Bible (KNCL) BSI 2016
ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.