John 3:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
Kannada BSI Bible 2016
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ.
Kannada Bible (KNCL) BSI 2016
ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.