John 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
Kannada BSI Bible 2016
ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಕೊದೇಮನು ಆತನನ್ನು - ಮನುಷ್ಯನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ತಿರಿಗಿ ಸೇರಿ ಹುಟ್ಟುವದಾದೀತೇ? ಎಂದು ಕೇಳಿದನು.
Kannada Bible (KNCL) BSI 2016
ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.