John 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
Kannada BSI Bible 2016
ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.
Kannada Bible (KNCL) BSI 2016
ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.