John 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,
Kannada BSI Bible 2016
ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ
Kannada Bible (KNCL) BSI 2016
ಯೊವಾನ್ನನಿಗಿಂತಲೂ ಯೇಸು ಸ್ವಾಮಿಯೇ ಹೆಚ್ಚುಮಂದಿ ಜನರನ್ನು ಶಿಷ್ಯರನ್ನಾಗಿಸಿಕೊಳ್ಳುತ್ತಾ, ಅವರಿಗೆ ದೀಕ್ಷಾಸ್ನಾನವನ್ನು ಮಾಡಿಸುತ್ತಾ ಇದ್ದಾರೆಂಬ ವಾರ್ತೆ ಫರಿಸಾಯರ ಕಿವಿಗೆ ಬಿದ್ದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರಲ್ಲಿ ಯೋಹಾನನಿಗಿಂತಲೂ ಯೇಸು ಹೆಚ್ಚಿನ ಶಿಷ್ಯರನ್ನು ಹೊಂದಿದ್ದಾರೆ ಮತ್ತು ದೀಕ್ಷಾಸ್ನಾನ ಮಾಡಿಸುತ್ತಾರೆ ಎಂಬುವುದನ್ನು ಫರಿಸಾಯರು ಕೇಳಿಸಿಕೊಂಡರು.