John 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?
Kannada BSI Bible 2016
ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
Kannada Bible (KNCL) BSI 2016
ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?