John 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
Kannada BSI Bible 2016
ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಹಿರಿಯನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು; ಅವನೂ ಅವನ ಮಕ್ಕಳೂ ಅವನು ಸಾಕಿದೆಲ್ಲವೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದರು ಅನ್ನಲು
Kannada Bible (KNCL) BSI 2016
ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.