John 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
Kannada BSI Bible 2016
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.
Kannada Bible (KNCL) BSI 2016
ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.