John 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,
Kannada BSI Bible 2016
ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸು - ಅಯ್ಯಾ, ನನಗೆ ಆ ನೀರನ್ನು ಕೊಡು; ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗಲಿಕ್ಕಿಲ್ಲ; ನೀರು ಸೇದುವದಕ್ಕೆ ಇಷ್ಟು ದೂರ ಬರಬೇಕಾದದ್ದೂ ಇರುವದಿಲ್ಲ ಅನ್ನಲು
Kannada Bible (KNCL) BSI 2016
ಅದಕ್ಕೆ ಆಕೆ, “ಸ್ವಾಮೀ, ಅಂಥ ನೀರನ್ನು ಕೊಡಿ; ಇನ್ನು ಮುಂದೆ ನನಗೆ ದಾಹವಾಗದಿರಲಿ. ನೀರು ಸೇದಲು ಇಷ್ಟು ದೂರ ಬರುವುದು ತಪ್ಪಲಿ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆ ಸ್ತ್ರೀಯು, “ಅಯ್ಯಾ, ಆ ನೀರನ್ನೇ ನನಗೆ ಕೊಡು. ಆಗ ನನಗೆ ದಾಹವಾಗುವುದಿಲ್ಲ. ಇನ್ನು ಮುಂದೆ ನಾನು ನೀರು ಸೇದುವುದಕ್ಕೆ ಇಲ್ಲಿಗೆ ಬರುವ ಅವಶ್ಯವಿರುವುದಿಲ್ಲ,” ಎಂದಳು.