John 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.
Kannada BSI Bible 2016
ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಐದುಮಂದಿ ಗಂಡಂದಿರಿದ್ದರು, ಈಗ ಇರುವವನು ನಿನಗೆ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ ಅಂದನು.
Kannada Bible (KNCL) BSI 2016
“ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ನಿನಗೆ ಐದು ಜನ ಗಂಡಂದಿರು ಇದ್ದರು. ಈಗ ನಿನ್ನೊಡನೆ ಇರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು ಯೇಸು ಸ್ವಾಮಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ಐದು ಮಂದಿ ಗಂಡಂದಿರು ಇದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು.