John 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
Kannada BSI Bible 2016
ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು; ಆದರೆ ನೀವು ಆರಾಧನೆಮಾಡತಕ್ಕ ಸ್ಥಳವು ಯೆರೂಸಲೇವಿುನಲ್ಲಿ ಅದೆ ಅನ್ನುತ್ತೀರಿ ಎಂದು ಹೇಳಿದಾಗ
Kannada Bible (KNCL) BSI 2016
ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.