John 4:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
Kannada BSI Bible 2016
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಆಕೆಗೆ - ಅಮ್ಮಾ, ನಾನು ಹೇಳುವ ಮಾತನ್ನು ನಂಬು; ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ ಈ ಬೆಟ್ಟಕ್ಕೂ ಹೋಗುವದಿಲ್ಲ, ಯೆರೂಸಲೇವಿುಗೂ ಹೋಗುವದಿಲ್ಲ.
Kannada Bible (KNCL) BSI 2016
ಆಗ ಯೇಸು, “ತಾಯಿ, ನಾನು ಹೇಳುವುದನ್ನು ಕೇಳು. ಪಿತನ ಆರಾಧನೆಗೆ ಈ ಬೆಟ್ಟಕ್ಕೂ ಬರಬೇಕಾಗಿಲ್ಲ; ಜೆರುಸಲೇಮಿಗೂ ಹೋಗಬೇಕಾಗಿಲ್ಲ. ಅಂಥ ಕಾಲವೂ ಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.