John 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.
Kannada BSI Bible 2016
ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಆದದರಿಂದ ನಾವು ಅರಿತಿರುವದನ್ನೇ ಆರಾಧಿಸುವವರಾಗಿದ್ದೇವೆ; ನೀವು ಅರಿಯದೆ ಇರುವಂಥದನ್ನು ಆರಾಧಿಸುವವರು.
Kannada Bible (KNCL) BSI 2016
ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.