John 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
Kannada BSI Bible 2016
ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ.
Kannada Bible (KNCL) BSI 2016
ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.