John 4:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
Kannada BSI Bible 2016
ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸು ಆತನಿಗೆ - ಮೆಸ್ಸೀಯನು ಅಂದರೆ ಕ್ರಿಸ್ತನು ಬರುತ್ತಾನೆಂದು ಬಲ್ಲೆನು; ಆತನು ಬಂದ ಮೇಲೆ ನಮಗೆ ಎಲ್ಲಾ ತಿಳಿಸುವನು ಎಂದು ಹೇಳಲು
Kannada Bible (KNCL) BSI 2016
ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.