John 4:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
Kannada BSI Bible 2016
ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಒಬ್ಬ ಹೆಂಗಸಿನ ಸಂಗಡ ಮಾತಾಡುತ್ತಿರುವದನ್ನು ಕಂಡು ಆಶ್ಚರ್ಯಪಟ್ಟರು. ಆದರೂ - ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತಾಡುತ್ತೀ? ಎಂದು ಒಬ್ಬರೂ ಕೇಳಲಿಲ್ಲ.
Kannada Bible (KNCL) BSI 2016
ಅಷ್ಟರಲ್ಲಿ ಹಿಂದಿರುಗಿ ಬಂದ ಶಿಷ್ಯರು ಯೇಸು ಆ ಮಹಿಳೆಯೊಡನೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೆ, “ಏನು ಬೇಕು?” ಎಂದು ಆಕೆಯನ್ನಾಗಲಿ. “ಆಕೆಯೊಡನೆ ಏಕೆ ಮಾತನಾಡುತ್ತಿದ್ದೀರಿ?” ಎಂದು ಯೇಸುವನ್ನಾಗಲಿ ಅವರು ಕೇಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರೊಳಗೆ ಅವರ ಶಿಷ್ಯರು ಬಂದು ಯೇಸು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿಮಗೆ ಏನು ಬೇಕು? ಆಕೆಯೊಂದಿಗೆ ಏಕೆ ಮಾತನಾಡುತ್ತಿರುವಿರಿ?” ಎಂದು ಒಬ್ಬನಾದರೂ ಕೇಳಲಿಲ್ಲ.