John 4:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.
Kannada BSI Bible 2016
ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು
Kannada Bible (KNCL) BSI 2016
“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.