John 4:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.
Kannada BSI Bible 2016
ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ನಾಲ್ಕು ತಿಂಗಳಿಗೆ ಸುಗ್ಗಿಬರುವದೆಂದು ನೀವು ಹೇಳುವದುಂಟಷ್ಟೆ. ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ; ಅವು ಬೆಳ್ಳಗಾಗಿ ಕೊಯ್ಲಿಗೆ ಬಂದವೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು, ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುತ್ತದೆ’ ಎಂದು ಹೇಳುವುದಿಲ್ಲವೇ? ಮತ್ತು ಇಗೋ, ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ. ಏಕೆಂದರೆ ಅವು ಈಗಾಗಲೇ ಸುಗ್ಗಿಗೆ ಸಿದ್ಧವಾಗಿವೆ.