John 4:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.
Kannada BSI Bible 2016
ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.
Kannada Bible (KNCL) BSI 2016
ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.