John 4:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
Kannada BSI Bible 2016
ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
Kannada Bible (KNCL) BSI 2016
‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.