John 4:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.
Kannada BSI Bible 2016
ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದ್ದರಿಂದ ಆ ಸಮಾರ್ಯರು ಆತನ ಬಳಿಗೆ ಬಂದು - ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅವರಲ್ಲೇ ಇದ್ದನು.
Kannada Bible (KNCL) BSI 2016
ಎಂದೇ ಆ ಊರಿನ ಜನರು ಯೇಸುವಿನ ಬಳಿಗೆ ಬಂದು ತಮ್ಮಲ್ಲಿಯೇ ತಂಗಬೇಕೆಂದು ಬೇಡಿಕೊಂಡರು. ಅಂತೆಯೇ ಯೇಸು, ಅಲ್ಲಿ ಎರಡು ದಿನ ಉಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಾರ್ಯದವರು ಯೇಸುವಿನ ಬಳಿಗೆ ಬಂದು ತಮ್ಮೊಂದಿಗೆ ಇರಬೇಕೆಂದು ಅವರನ್ನು ಬೇಡಿಕೊಂಡರು. ಹೀಗೆ ಯೇಸು ಎರಡು ದಿವಸ ಅಲ್ಲಿಯೇ ಉಳಿದರು.