John 4:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
Kannada BSI Bible 2016
ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.
Kannada Bible (KNCL) BSI 2016
ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.