John 4:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
Kannada BSI Bible 2016
ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಲಿಲಾಯದವರು ತಾವೂ ಯೆರೂಸಲೇವಿುನ ಜಾತ್ರೆಗೆ ಹೋಗಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ನೋಡಿದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಆದರದಿಂದ ಅಂಗೀಕರಿಸಿದರು.
Kannada Bible (KNCL) BSI 2016
ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಅವರನ್ನು ಸ್ವಾಗತಿಸಿದರು. ಪಸ್ಕಹಬ್ಬದ ಸಮಯದಲ್ಲಿ ಯೇಸು ಯೆರೂಸಲೇಮಿನಲ್ಲಿ ಮಾಡಿದವುಗಳನ್ನೆಲ್ಲಾ ಕಂಡಿದ್ದರು.