John 4:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
Kannada BSI Bible 2016
ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯೇಸು, ತಾನು ನೀರನ್ನು ದ್ರಾಕ್ಷಾರಸವಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಬಂದನು. ಅಲ್ಲಿದ್ದಾಗ ಅರಮನೆಯ ಒಬ್ಬ ಪ್ರಧಾನನ ಮಗನು ಕಪೆರ್ನೌವಿುನಲ್ಲಿ ಅಸ್ವಸ್ಥನಾಗಿದ್ದನು.
Kannada Bible (KNCL) BSI 2016
ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.