John 4:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್‌ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
Kannada BSI Bible 2016
ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಪ್ರಧಾನನು ಕೇಳಿದಾಗ ತನ್ನ ಮಗನು ಸಾಯುವ ಹಾಗಿದ್ದದರಿಂದ ಯೇಸುವಿನ ಬಳಿಗೆ ಹೋಗಿ - ನೀನು ಇಳಿದು ಬಂದು ನನ್ನ ಮಗನನ್ನು ಸ್ವಸ್ಥಮಾಡಬೇಕೆಂದು ಬೇಡಿಕೊಂಡನು;
Kannada Bible (KNCL) BSI 2016
ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.