John 4:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು” ಎಂದು ಉತ್ತರಕೊಟ್ಟನು. ಯೇಸುವಿನ ಮಾತನ್ನು ಅವನು ನಂಬಿ ಮನೆಗೆ ಹಿಂತಿರುಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.
Kannada BSI Bible 2016
ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ನಿನ್ನ ಮಗನು ಬದುಕುತ್ತಾನೆ ಹೋಗು ಎಂದು ಉತ್ತರ ಕೊಟ್ಟನು. ಆ ಗೃಹಸ್ಥನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು.
Kannada Bible (KNCL) BSI 2016
ಆಗ ಯೇಸು, “ಹೋಗು, ನಿನ್ನ ಮಗನು ಬದುಕುತ್ತಾನೆ,” ಎಂದು ಹೇಳಿದರು. ಆ ಅಧಿಕಾರಿ ಯೇಸುವಿನ ಮಾತನ್ನು ನಂಬಿ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು,” ಎಂದರು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು.