John 4:52 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು, “ನನ್ನ ಮಗನಿಗೆ ಯಾವಾಗ ಗುಣವಾಯಿತು?” ಎಂದು ಕೇಳಿದನು. ಸೇವಕರುಗಳು, “ನಿನ್ನೆ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಅವನ ಜ್ವರವು ಬಿಟ್ಟಿತು” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
Kannada BSI Bible 2016
ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಷ್ಟು ಘಂಟೆಗೆ ಅವನಿಗೆ ರೋಗವು ಇಳಿತರವಾಯಿತೆಂದು ಅವನು ಅವರನ್ನು ಕೇಳಿದಾಗ ಅವರು - ನಿನ್ನೆ ಮಧ್ಯಾಹ್ನದ ಒಂದು ಗಂಟೆಗೆ ಜ್ವರವು ಅವನನ್ನು ಬಿಟ್ಟಿತು ಅಂದರು.
Kannada Bible (KNCL) BSI 2016
ಎಷ್ಟುಹೊತ್ತಿಗೆ ತನ್ನ ಮಗ ಚೇತರಿಸಿಕೊಂಡನೆಂದು ಆ ಅಧಿಕಾರಿ ವಿಚಾರಿಸಿದಾಗ, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಅವನ ಜ್ವರ ಬಿಟ್ಟಿತು,” ಎಂದು ಆಳುಗಳು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಯಾವ ಸಮಯದಲ್ಲಿ ಮಗನು ಚೇತರಿಸಿಕೊಂಡನು?” ಎಂದು ಅವರನ್ನು ವಿಚಾರಿಸಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಜ್ವರವು ಬಿಟ್ಟಿತು,” ಎಂದು ಸೇವಕರು ಅವನಿಗೆ ಹೇಳಿದರು.