John 4:53 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಮಗನು ಬದುಕುವನು” ಎಂದು ಯೇಸು ಹೇಳಿದ್ದು ಇದೇ ಹೊತ್ತಿನಲ್ಲಿ ಎಂಬುದು ತಂದೆಗೆ ತಿಳಿದಿತ್ತು. ಆದ್ದರಿಂದ ಅವನು ಮತ್ತು ಅವನ ಮನೆಯವರೆಲ್ಲ ಯೇಸುವನ್ನು ನಂಬಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
Kannada BSI Bible 2016
ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಿನ್ನ ಮಗನು ಬದುಕುತ್ತಾನೆಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದಾಯಿತೆಂದು ತಂದೆಯು ತಿಳುಕೊಂಡದರಿಂದ ಅವನೂ ಅವನ ಮನೆಯವರೆಲ್ಲರೂ ಆತನನ್ನು ನಂಬಿದರು.
Kannada Bible (KNCL) BSI 2016
‘ನಿನ್ನ ಮಗ ಬದುಕುತ್ತಾನೆ’ ಎಂದು ಯೇಸು ಹೇಳಿದ್ದ ಗಳಿಗೆಯಲ್ಲಿಯೇ ತನ್ನ ಮಗ ಬದುಕಿಕೊಂಡನೆಂದು ತಂದೆಗೆ ತಿಳಿಯಿತು. ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ವಿಶ್ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ, “ನಿನ್ನ ಮಗನು ಬದುಕುವನು” ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.