John 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
Kannada BSI Bible 2016
ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
Kannada Bible (KNCL) BSI 2016
ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.