John 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.
Kannada BSI Bible 2016
ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವದಕ್ಕಾಗಿ ಊರೊಳಗೆ ಹೋಗಿರಲು ಸಮಾರ್ಯದವಳಾದ ಒಬ್ಬ ಹೆಂಗಸು ನೀರು ಸೇದುವದಕ್ಕೆ ಬಂದಳು. ಯೇಸು ಆಕೆಯನ್ನು - ಅಮ್ಮಾ, ನೀರು ಕುಡಿಯುವದಕ್ಕೆ ಕೊಡು ಎಂದು ಕೇಳಿದನು.
Kannada Bible (KNCL) BSI 2016
ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮಾರ್ಯದವಳಾದ ಒಬ್ಬ ಸ್ತ್ರೀಯು ನೀರು ಸೇದುವುದಕ್ಕಾಗಿ ಬಂದಳು. ಯೇಸು ಆಕೆಗೆ, “ನನಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು.