John 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.
Kannada BSI Bible 2016
ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರಿಗೂ ಸಮಾರ್ಯರಿಗೂ ಬಳಕೆಯಿಲ್ಲದಿರಲಾಗಿ ಆ ಸಮಾರ್ಯದವಳು ಆತನಿಗೆ - ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ನೀರು ಬೇಡುವದು ಹೇಗೆ ಎಂದು ಹೇಳಿದಳು.
Kannada Bible (KNCL) BSI 2016
ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.