John 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
Kannada BSI Bible 2016
ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ದಿವಸ ಸಬ್ಬತ್‍ದಿನವಾಗಿತ್ತು; ಹೀಗಿರುವದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ - ಈ ಹೊತ್ತು ಸಬ್ಬತ್‍ದಿನವಾಗಿದೆ; ನೀನು ಹಾಸಿಗೆಯನ್ನು ಹೊರುವದು ಸರಿಯಲ್ಲವೆಂದು ಹೇಳಿದ್ದಕ್ಕೆ
Kannada Bible (KNCL) BSI 2016
ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.