John 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
Kannada BSI Bible 2016
ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನಾರೆಂಬದು ಸ್ವಸ್ಥವಾದವನಿಗೆ ತಿಳಿದಿರಲಿಲ್ಲ; ಆ ಸ್ಥಳದಲ್ಲಿ ಜನರ ಗುಂಪು ಇದ್ದದರಿಂದ ಯೇಸು ಸರಕೊಂಡುಹೋಗಿದ್ದನು.
Kannada Bible (KNCL) BSI 2016
ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು.