John 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
Kannada BSI Bible 2016
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.
Kannada Bible (KNCL) BSI 2016
ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.