John 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
Kannada BSI Bible 2016
ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು.
Kannada Bible (KNCL) BSI 2016
ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.