John 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.
Kannada BSI Bible 2016
ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯು ಮಗನ ಮೇಲೆ ಮಮತೆಯಿಟ್ಟು ತಾನು ಮಾಡುವವುಗಳನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ದೊಡ್ಡ ಕೆಲಸಗಳನ್ನು ಅವನಿಗೆ ತೋರಿಸುವನು; ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವದು.
Kannada Bible (KNCL) BSI 2016
ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.