John 5:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
Kannada BSI Bible 2016
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.
Kannada Bible (KNCL) BSI 2016
ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.