John 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
Kannada BSI Bible 2016
ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಐದು ಮಂಟಪಗಳಿವೆ; ಇವುಗಳಲ್ಲಿ ಬಹುಮಂದಿ ರೋಗಿಗಳೂ ಕುರುಡರೂ ಕುಂಟರೂ ಮೈಒಣಗಿದವರೂ ಬಿದ್ದುಕೊಂಡಿರುವರು.
Kannada Bible (KNCL) BSI 2016
ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು.