John 5:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
Kannada BSI Bible 2016
ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ.
Kannada Bible (KNCL) BSI 2016
ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.