John 5:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
Kannada BSI Bible 2016
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.
Kannada Bible (KNCL) BSI 2016
ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.