John 5:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
Kannada BSI Bible 2016
ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಧ್ವನಿಯನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ,
Kannada Bible (KNCL) BSI 2016
ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಕಳುಹಿಸಿದ ತಂದೆ ತಾವೇ ನನ್ನನ್ನು ಕುರಿತು ಸಾಕ್ಷಿ ಹೇಳಿದ್ದಾರೆ. ನೀವು ಎಂದೂ ಅವರ ಸ್ವರವನ್ನು ಕೇಳಲಿಲ್ಲ, ಅವರ ರೂಪವನ್ನು ಕಾಣಲಿಲ್ಲ.