John 5:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!
Kannada BSI Bible 2016
ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ತಂದೆಯ ಮುಂದೆ ನಿಮ್ಮ ಮೇಲೆ ತಪ್ಪುಹೊರಿಸುವೆನೆಂದು ನೆನಸಬೇಡಿರಿ; ನೀವು ಆಶ್ರಯಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ತಪ್ಪುಹೊರಿಸುವವನು.
Kannada Bible (KNCL) BSI 2016
ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ.