John 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
Kannada BSI Bible 2016
ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ
Kannada Bible (KNCL) BSI 2016
ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.